ಹರ್ಷಾ ಕೊಲೆ ಪ್ರಕರಣ: ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

  • 15 Jan 2024 , 5:08 AM
  • Belagavi
  • 152

ಬೆಳಗಾವಿ: ಶಿವಮೊಗ್ಗ ಭಜರಂಗದಳ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಖಂಡಿಸಿ ಬುಧವಾರ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗಾವಿಯ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿ ತೆರೆದ ವಾಹನದಲ್ಲಿ ಹರ್ಷ ಭಾವಚಿತ್ರದ ಫ್ಲೆಕ್ಸ್ ಅಳವಡಿಕೆ ಮಾಡಿ ಜೈ ಶಿವಾಜಿ, ಹರ ಹರ ಮಹದೇವ್ ಎಂದು ಘೋಷಣೆ ಕೂಗಿದರು. ಅಮರ್ ರಹೇ ಅಮರ್ ರಹೇ ಹರ್ಷ ಅಮರ್ ಹರೇ ಎಂದು ಕಾರ್ಯಕರ್ತರ ಘೋಷಣೆ ಕೂಗಿದರು.

ಸ್ಥಳೀಯ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಪೋರೇಟರಗಳು, ದಿವಂಗತ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಅಂಗಡಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ಹಿನ್ನಲೆ ಡಿಸಿಪಿ, ಸೇರಿದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

Read All News