ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ, ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು; ಡಾ.ಬಸವರಾಜ

  • 9 Jan 2024 , 2:14 AM
  • Haveri
  • 506

ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ಪಟ್ಟಣದ ರೋಟರಿ ಕಾಲೇಜಿನಲ್ಲಿ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಭಾನುವಾರ ಕಾಲೇಜ್‍ನಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಬಸವರಾಜ ಕೇಲಗಾರ ಮಾತನಾಡಿ, ಸದಾ ಏಕಾಗ್ರತೆಯಿಂದ ಅಧ್ಯಯನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಉತ್ತಮ ಅಂಕಗಳಿಸಲು ಸಾಧ್ಯವಾಗುತ್ತದೆ. ನಿರಂತರವಾದ ಅಭ್ಯಾಸದಿಂದ ಉತ್ತಮ ಸಾಧನೆ ಮಾಡಲು ಸಾಧ್ಯ. ಯಾವುದೇ ವಿಷಯವನ್ನು ಕಷ್ಟಪಟ್ಟು ಅಧ್ಯಯನ ಮಾಡದೇ ಇಷ್ಟಪಟ್ಟು ಅಧ್ಯಯನ ಮಾಡಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ತೋರಲು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುತ್ತದೆ ಎಂದರು. ರೋಟರಿ ಕ್ಲಬ್ ಅಧ್ಯಕ್ಷ ಜಗದೀಶ ಕಲ್ಯಾಣಿ, ಟ್ಯಾಗೋರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿ.ಸಿ. ಪಾಟೀಲ, ಶ್ರೀನಿವಾಸ ಗುಪ್ತಾ, ವಿರೇಶ ಹನುಗೂಡಿಮಠ, ಫಕ್ಕಿರಪ್ಪ ಹೊನ್ನಾಳಿ, ಕೆ.ವಿ. ಶ್ರೀನಿವಾಸ, ರಾಜಣ್ಣ ಮೋಟಗಿ, ಜಿ.ಜಿ. ಹೊಟ್ಟಿಗೌಡ್ರ, ಶಾಲೆಯ ಮುಖ್ಯಶಿಕ್ಷಕಿ ವೀಣಾ ಸೇರಿದಂತೆ ಕಾಲೇಜ್‍ನ ಸಿಬ್ಬಂದಿ ವರ್ಗ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Read All News