ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರ ಸ್ವೀಕಾರ

  • 23 Dec 2023 , 6:51 AM
  • Belagavi
  • 115

ಬೆಳಗಾವಿ: ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗುರುವಾರ ಸಂಜೆ ಅಧಿಕಾರವನ್ನು ವಹಿಸಿಕೊಂಡರು.

ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರವನ್ನು ಹಸ್ತಾಂತರಿಸಿ ಶುಭ ಕೋರಿದರು.

ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನವರಾದ ನಿತೇಶ್ ಪಾಟೀಲ ಅವರು ಇದಕ್ಕೂ ಮುಂಚೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಸಿ.ಬಿ.ಕೊಡ್ಲಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೂಲತಃ ಬೆಳಗಾವಿ ಜಿಲ್ಲೆಯವರೇ ಆಗಿರುವ ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸರಕಾರ ವರ್ಗಾವಣೆಗೊಳಿಸಿದೆ.

Read All News