ಎಸ್‌ಎಸ್‌ಎಲ್‌ಸಿ ಫಲಿತಾಂಶ ಆ.10 ರಂದು ಪ್ರಕಟ : ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ

  • 15 Jan 2024 , 2:05 AM
  • Bengaluru
  • 110

ಬೆಂಗಳೂರು : 2019-20 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10 ರ ಸೋಮವಾರ ಮಧ್ಯಾಹ್ನ 3:00 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

ಈ ಮೊದಲು ಆಗಸ್ಟ್ 6 ಅಥವಾ 7 ರಂದು ಫಲಿತಾಂಶ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಫಲಿತಾಂಶ ಪ್ರಕಟಣೆಗೆ ದಿನ ನಿಗದಿಯಾಗಿಲ್ಲ ಎಂದು ಸಚಿವರು ನಿನ್ನೆಯಷ್ಟೇ ಸ್ಪಷ್ಟನೆ ನೀಡಿದ್ದರು. ಆದರೆ ಇಂದು ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಫಲಿತಾಂಶ ಪ್ರಕಟಣೆ ದಿನಾಂಕವನ್ನು ಘೋಷಿಸಿದ್ದಾರೆ.

Read All News