ಜೂ. 30 ರಂದು ಬೆಂಗಳೂರಿನಲ್ಲಿ ಜಂಗಮರ ಶಕ್ತಿ ಪ್ರದರ್ಶನ

  • 15 Jan 2024 , 3:47 AM
  • Belagavi
  • 201

ಬೆಳಗಾವಿ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಧಿಕಾರಿಗಳನ್ನು ಬಳಸಿಕೊಂಡು ಅಖಿಲ ಭಾರತ ಕರ್ನಾಟಕ ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಬಿ.ಡಿ.ಹಿರೇಮಠ ಅವರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಜೂ.30 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯ ಪ್ರತಿಪಾದನಾ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಬಸಲಿಂಗಯ್ಯ ಚಿಕ್ಕಮಠ ಹೇಳಿದರು.

ಶುಕ್ರವಾರ ನಗರದಲ್ಲಿ ಕರೆಯಲಾದ ಸುದ್ದಿ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು‌.

ರಾಜ್ಯದಲ್ಲಿ ಜಂಗಮ ಸಮುದಾಯ ಸುಮಾರು 40 ಲಕ್ಷ ಜನಸಂಖ್ಯೆಯಲ್ಲಿ ಇದ್ದಾರೆ. ನಮಗೆ ಸಿಗಬೇಕಾದ ಸಂವಿಧಾನ ಬದ್ಧವಾದ ಹಕ್ಕುಗಳನ್ನು ಇಲ್ಲಿಯವರೆಗೆ ಪಡೆಯಲು ಸಾಧ್ಯವಾಗುತ್ತಿಲ್ಲ. ಕೆಲ ಕುತಂತ್ರ ರಾಜಕಾರಣಿಗಳ ಸ್ವಾರ್ಥ ರಾಜಕೀಯತೆ, ಜಾತಿಯತೆಯಿಂದ ಇತರೆ ಜನಾಂಗದ ಜನರಿಗೆ ಸರಕಾರದ ಮಿಸಲಾತಿ ಸೌವಲತ್ತುಗಳು ಸಿಗಬಾರದು ಎಂಬ ದುರುದ್ದೇಶದಿಂದ ರಾಜಕೀಯ ಪರಮಾಧಿಕಾರ ದುರ್ಬಳಕೆ ಮಾಡಿ ಜಂಗಮರಿಗೆ ಸಿಗಬೇಕಾದ ಹಕ್ಕುಗಳನ್ನು ಸಿಗದಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯ ಪ್ರತಿಪಾದನಾ ಸತ್ಯಾಗ್ರಹದಲ್ಲಿ ಎಲ್ಲ ಶಿವಾಚಾರ್ಯ ಸ್ವಾಮೀಜಿಗಳು ಬೆಂಬಲ ನೀಡಿದ್ದು, ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದರು.

ಎ.ಆರ್.ಚಿಕ್ಕಮಠ, ಶ್ರೀಕಾಂತಯ್ಯ ಕುಲಕರ್ಣಿ, ಮಹಾಂತೇಶ ಪೂಜಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read All News