ಸಿಎಂ ಕೊರೋನಾ ವರದಿ ನೆಗೆಟಿವ್ : ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

  • 14 Jan 2024 , 10:54 PM
  • Bengaluru
  • 96

ಬೆಂಗಳೂರು : ಕೊರೋನಾ ಸೋಂಕಿನಿಂದಾಗಿ ಕಳೆದ ಭಾನುವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಂಪೂರ್ಣವಾಗಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಅವರು ಆಸ್ಪತ್ರೆಗೆ ಸೇರಿ ಇಂದಿಗೆ 9 ದಿನವಾಗಿದ್ದು, ಇಂದಿನ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ವರದಿ ನೆಗೆಟಿವ್ ಬಂದಿರುವುದರಿಂದ ಯಡಿಯೂರಪ್ಪ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ನಾಳೆ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಆದರೆ ಕೊರೋನಾ ಮುಂಜಾಗ್ರತಾ ಕ್ರಮವಾಗಿ ಕೆಲ ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲೇ ಇರಲಿದ್ದಾರೆ ಎನ್ನಲಾಗುತ್ತಿದೆ.

Read All News