ಬೆಳಗಾವಿ: ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಯಾರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ತಡೆಯಬಹುದು.ಮಾನವ ಹಕ್ಕುಗಳ ಸಂರಕ್ಷಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಅವಶ್ಯಕ ಎಂದು ಕೆ.ಎಲ್ ಇ ಬಿ. ವಿ.ಬೆಲ್ಲದ ಕಾನೂನು ಮಯಾವಿದ್ಯಾಲಯದ ಪ್ರಾಚಾರ್ಯ ಡಾ. ಜಯಸಿಂಹ ಬೆಳಗಲ್ ಹೇಳಿದರು.
ಇತ್ತೀಚೆಗೆ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಬೆಳಗಾವಿ ಜಿಲ್ಲಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎನ್.ಸಿ ಸುರೇಶ್ ವಹಿಸಿದ್ದರು .
ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯ ಮುಖ್ಯ ಸಲಹೆಗಾರ ವೆಂಕಟೇಶ ಅವರು ಮಾನವ ಹಕ್ಕುಗಳು ಮತ್ತು ಸಂರಕ್ಷಣೆಯ ಬಗ್ಗೆ ಮಾರ್ಗದರ್ಶನ ನೀಡಿದರು.
ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಮಂಜುನಾಥ ,,ಸಂಸ್ಥೆಯ ಮೈಸೂರು ಜಿಲ್ಲಾ ಗೌರವಾಧ್ಯಕ್ಷ ಅಬರೀಶ್ ,ಸಂಸ್ಥೆಯ ಮೈಸೂರು ಜಿಲ್ಲಾಧ್ಯಕ್ಷ ಯೋಗೇಶ್ ಗುಣಪಾಲ್ ,ರಾಜ್ಯ ಸಂಚಾಲಕ ಮಹಾದೇವ್,ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಶಿವಶಂಕರ್ ಆರ್.ಸಂಸ್ಥೆಯ ರಾಮನಗರ ಜಿಲ್ಲಾ ಕಾರ್ಯಾಧ್ಯಕ್ಷ ಕುಮಾರ್ ಜಿ.ಎಮ್ ಗೌರವ ಅತಿಥಿಗಳಾಗಿ ಪಾಲ್ಗೊಂಡರು .
ಸಮಾರಂಭದಲ್ಲಿ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಬೆಳಗಾವಿ ಜಿಲ್ಲಾ ಘಟಕದ ಗೌರವ ಅಧ್ಯಕ್ಷರಾಗಿ ಡಾ.ಎಸ್ ಎಮ್ ದೊಡಮನಿ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಅನಂತ ಗೊನಬಾಳ,ಜಿಲ್ಲಾಧ್ಯಕ್ಷರಾಗಿ ವಿಜಯ ಕುಮಾರ ಮಂಗಸೂಳೆ ಮತ್ತಿತರ ಪದಾಧಿಕಾರಿಗಳು ಅಧಿಕಾರ ಗ್ರಹಣ ಮಾಡಿದರು.
ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ ಮಂಗಸೂಳೆ ಸರ್ವರಿಗೆ ಸ್ವಾಗತ ಕೋರಿದರು .ಸುನೀತಾ ದೇಸಾಯಿ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಅಜೀಜ್ ಅಹ್ಮದ ಅರಬರ ವಂದಿಸಿದರು.ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷ ದಯಾನಂದ ಹಿರೇಮಠ,ಜಿಲ್ಲಾ ಕಾರ್ಯಕಾರಿ ಅಧ್ಯಕ್ಷ ಅನಂತ ಗೊನಬಾಳ,ಜಿಲ್ಲಾ ಕಾರ್ಯದರ್ಶಿ ರಮೇಶ್ ವನಹಳ್ಳಿ.ಮಹಿಳಾ ಘಟಕದ ಅಧ್ಯಕ್ಷೆ ಸಿಂಧು ಎಮ್ ಸೇರಿದಂತೆ ಪದಾಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು