ಕೇರಳಾದ ಮಾನಂತವಾಡಿಯ ಜಮೀನಿನಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ. ಜಮೀನಿನಲ್ಲಿದ್ದ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ ಕಾರಣ್ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು . ರೋಗ ದೃಢಪಟ್ಟ ಜಮೀನಿನಲ್ಲಿದ್ದ ಎಲ್ಲಾ ಹಂದಿಗಳನ್ನು ಕೊಲ್ಲಲು ನಿರ್ಧರಿಸಲಾಗಿತ್ತು ಎಂದು ತಿಳಿದು ಬಂದಿದೆ . ಇದು ಮನುಷ್ಯರಿಗೆ ಹರಡುವ ವೈರಸ್ ಅಲ್ಲ, ಆದರೆ ಎಚ್ಚರಿಕೆ ಅಗತ್ಯ ಎಂದು ಆರೋಗ್ಯ ಇಲಾಖೆ ಹೇಳಿದೆ.