ಚಿಕ್ಕಮಗಳೂರು:ಬಿಜೆಪಿ ಇದೊಂದು ಕೇವಲ ರಾಜಕೀಯ ಪಕ್ಷವಲ್ಲಾ, ಈ ಪಕ್ಷಕ್ಕೆ ತನ್ನದೇ ಆದಂತಹ ಇತಿಹಾಸ ವಿಚಾರ ಸಿದ್ಧಾಂತಕ್ಕಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವಂತದ್ದು ಇತಿಹಾಸವಾದರೆ ಇಂದಿನ ಕಾಲಘಟ್ಟದಲ್ಲೂ ಕೂಡ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದು ಒದಗಿರುವುದು ಕಾರ್ಯಕರ್ತರಿಗೆ ನೋವಾಗುತ್ತಿದೆ. ಪ್ರವೀಣ್ ನೆಟ್ಟಾರ್ ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು ಅಮಾನುಷವಾಗಿ ಬರ್ಬರವಾಗಿ ಹೇಡಿಗಳಂತೆ ರಾತ್ರಿ ಸಮಯದಲ್ಲಿ ಹಿಂದಿನಿಂದ ಬಂದು ಹೊಡೆದಿರುವುದು ಹೇಡಿಗಳ ಕೃತ್ಯವಾಗಿದೆ. ಬಿಜೆಪಿಯ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತನಾಗಿ ಸೇವೆಗೋಸ್ಕರ ತೊಡಗಿಸಿಕೊಂಡಿದ್ದ ಹುಡುಗ ಇಂದು ಸಮಾಜಕ್ಕಾಗಿ ಪ್ರಾಣ ತೆತ್ತಿರುವದು ದುರ್ದೈವದ ಸಂಗತಿ. ಕರ್ನಾಟಕ ಸರ್ಕಾರ ಆರೋಪಿಗಳನ್ನು ಬಂದಿಸಿ ಉಗ್ರ ಶಿಕ್ಷೆಯನ್ನು ನೀಡಬೇಕು ಹಾಗೂ ಮುಂದೆ ಮತ್ತೆಂದೂ ಕೂಡ ಈ ತರಹದ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಪಡಿಸುತ್ತೇವೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಹಿಂದೆಲ್ಲಾ ನಡೆದಂತಹ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗೆ ಊಳಿದಿರುವ ಕಾರಣ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾದಿಯಾಗಿ ಜಿಲ್ಲೆಯ ಯುವಮೋರ್ಚಾದ ಎಲ್ಲಾ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸೇರಿ ಪಕ್ಷದ ಜವಾಬ್ದಾರಿಗಳಿಗೆ ಸಾಮೂಹಿಕ ರಾಜಿನಾಮೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ .