ಬೆಳಗಾವಿ: ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಖೋದಾನಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯ ಧ್ವಜಾರೋಹಣವನ್ನು ಸಂಭ್ರಮದಿಂದ ಆಚರಿಸಲಾಯಿತು. ದ್ವಜಾರೋಹನ ನೆರವೇರಿಸಿ ಮಾತನಾಡಿದ ಹಿರಿಯ ಶಿಕ್ಷಕ ಚನ್ನಪ್ಪಾ ಕರೆರುದ್ರನ್ನವರ ಇಂದು ನಾವು ಆಚರಿಸುತ್ತಿರುವ ಸಂಭ್ರಮದ ಈ ಸ್ವಾತಂತ್ರ್ಯೋತ್ಸವಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಯರ ಬಲಿದಾನ, ತ್ಯಾಗವೇ ಕಾರಣವಾಗಿದೆ. ನಾವೆಲ್ಲರೂ ದೇಶ ಸೇವೆ ಮಾಡುವುದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ. ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಸ್‍ಚಂದ್ರ ಬೋಸ್ ಮುಂತಾದ ಮಹನೀಯರ ತ್ಯಾಗ ಬಲಿದಾನವನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ ಸೇರಿದಂತೆ ಇತರರು ಉಪಸ್ಥಿತರಿದ್ದರು.