ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂದೆಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಸ್ವಾತಂತ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ದ್ವಜಾರೋಹನ ನೆರವೇರಿಸಿ ಮಾತನಾಡಿದ ಮುಖ್ಯೋಪಾಧ್ಯಾಯ ತೇಜಾಂಬ ನಾವು ಆಚರಿಸುತ್ತಿರುವ ಸಂಭ್ರಮದ ಈ ಸ್ವಾತಂತ್ರ್ಯೋತ್ಸವಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಯರ ಬಲಿದಾನ, ತ್ಯಾಗವೇ ಕಾರಣವಾಗಿದೆ. ನಾವೆಲ್ಲರೂ ದೇಶ ಸೇವೆ ಮಾಡುವುದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಸ್‍ಚಂದ್ರ ಬೋಸ್ ಮುಂತಾದ ಮಹನೀಯರ ತ್ಯಾಗ ಬಲಿದಾನವನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಕುಮಾರ ಸಿ.ಕೆ, ಶಾಲಾ ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.