ರಾಯಣ್ಣನ ಪ್ರತಿಮೆ ವಿಚಾರ ಹಾಲುಮತ ಸಮಾಜ, ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

  • 15 Jan 2024 , 1:41 AM
  • Belagavi
  • 104

ಬೆಳಗಾವಿ:ನಗರದ ಸಮೀಪ ಪೀರಣವಾಡಿ ಗ್ರಾಮದಲ್ಲಿ ಸ್ವಾತಂತ್ರ ದಿನವೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ಪೊಲೀಸರ ವಿರೋಧ ವ್ಯಕ್ತವಾಗಿತ್ತು.

ಅದರ ಹಿನ್ನಲೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿವಿಧ ತಾಲೂಕು ಗ್ರಾಮಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಈಗಾಗಲೇ ನಗರದ ಕಾಂಗ್ರೆಸ್ ರಸ್ತೆಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು ಮೂರ್ತಿ ಪ್ರತಿಷ್ಠಾಪನೆ ಮಾಡಲು ಅಭಿಮಾನಿಗಳಿಗೆ ಅನುಮತಿ ನೀಡಬೇಕೆಂದು ಮನವಿ ಮಾಡುತ್ತಿದ್ದಾರೆ. ಹಾಲುಮತ ಸಮಾಜ, ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Read All News