ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ,ಕಾರ್ಮಿಕ ಕಾಯ್ದೆ ತಕ್ಷಣ ವಾಪಸ್ ಪಡೆಯಿರಿ: ಪ್ರಕಾಶ ಕೋಳಿವಾಡ

  • 15 Jan 2024 , 3:55 AM
  • Haveri
  • 115

ಹಾವೇರಿ: ರಾಣೇಬೆನ್ನೂರು ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ವಾಪಸ್ಸು ಪಡೆಯಬೇಕು ಹಾಗೂ ಕೊರೋನಾ ನಿಯಂತ್ರಣ ಕಾರ್ಯಕ್ರಮದಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರದ ವಿಷಯದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜನದ್ವನಿ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದ ಮಿನಿ ವಿಧಾನಸೌದ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರಕಾಶ ಕೋಳಿವಾಡ ಮಾತನಾಡಿ,ಪ್ರಸ್ತುತ ದಿನಗಳಲ್ಲಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರು ಹಾಗೂ ಕಾರ್ಮಿಕ ವರ್ಗದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ನಿರ್ವಹಿಸುತ್ತಿವೆ ಬಡ ರೈತರು ತಮ್ಮ ಜಮಿನು ಗಳನ್ನು ಉಳಿಸಿಕೊಳ್ಳಲು ಕಷ್ಟಕರ ಸಂಗತಿ ಎದುರಾಗಿದೆ ಹಾಗೂ ಕಾರ್ಮಿಕರಿಗು ಸಂಕಷ್ಟ ಎದುರಾಗಿದೆ ಆದರೆ ನಮ್ಮ ಕೇಂದ್ರ ಸರ್ಕಾರವು ಬಡ ಜನರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಸರ್ಕಾರದ ಕಾಯ್ದೆಗಳ ಮೂಲಕ ಕಾರ್ಮಿಕ ವರ್ಗವನ್ನು ಹತ್ತಿಕುತ್ತಿದೆ ಇಗ ನಮ್ಮ ದೇಶ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ.ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ,ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿದರು. ಕೋವಿಡ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕೊರೊನಾ ತಡೆಯಲು ಸರ್ಕಾರಕ್ಕೆ ಆಗಿಲ್ಲ ಇಗ ಕೋವಿಡ್ ವೈರಸ್ ಯತೆಚ್ಚವಾಗಿ ಹರಡುತ್ತಿದೆ ಹಾಗೂ ಪ್ರವಾಹ ಬಂದರು ನೆರೆ ಪರಿಹಾರ ನೀಡಿಲ್ಲ ಎಂದು ಅವರು ಆರೋಪಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಗ್ರಾಮೀಣ ಹಾಗೂ ಶಹರ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಮತ್ತಿತರು ಭಾಗವಹಿಸಿದ್ದರು.

Read All News