ಸಾಹುಕಾರ ರಮೇಶ ಜಾರಕಿಹೊಳಿ ಕ್ಷೇತ್ರಕೆ ಭೇಟಿ ನೀಡಲಿದ್ದಾರೆ ಟ್ರಬಲ್ ಶೂಟರ್ ಡಿಕೆಶಿ

  • 15 Jan 2024 , 12:09 AM
  • Belagavi
  • 101

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ರಮೇಶ್ ಜಾರಕಿಹೊಳಿ ಕ್ಷೇತ್ರವಾದ ಗೋಕಾಕ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿರುವ ಡಿಕೆಶಿ. ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ‌ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ ಹಾಗೂ ಅಥಣಿ ಭಾಗಗಳು ಕೂಡ ಪ್ರವಾಹದಿಂದ ಅತಿಹೆಚ್ಚು ಹಾನಿಯಾಗಿವೆ. ಆದರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಕ್ಷೇತ್ರದ ನೆರೆಪೀಡಿತ ಪ್ರದೇಶಕ್ಕೆ ಮಾತ್ರ ಡಿಕೆಶಿ ಪ್ರವಾಸ ಮಾಡುತ್ತಿರುವುದು ಎಲ್ಲರಿಗೂ ಕುತೂಹಲ ಮೂಡಿಸಿದೆ. ಆಗಸ್ಟ್ 24 ರಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಡಿಕೆ ಶಿವಕುಮಾರ್ ಆಗಮಿಸಲಿದ್ದು, ಬೆಳಗ್ಗೆ 11.30 ಕ್ಕೆ ಗೋಕಾಕ್‌ನ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಅರಭಾವಿ ಕ್ಷೇತ್ರದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಸಂಜೆ 4 ಗಂಟೆಗೆ ಘಟಪ್ರಭಾದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಬೆಳಗಾವಿಯ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿ ಆಗಸ್ಟ್ 25 ರಂದು ಬೆಳಗಾವಿಯಿಂದ ಬಾಗಲಕೋಟೆಗೆ ಡಿಕೆಶಿ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

Read All News