ಬೆಳಗಾವಿ: ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ಹಸಿರುಸೇನೆಯವರು ಸಾಂಬ್ರಾ ವಿಮಾನ ನಿಲ್ದಾಣದ ಹೊರಗಡೆ ಜಿಲ್ಲೆಯ ಎಲ್ಲ 18 ಶಾಸಕರಿಗೆ ಧಿಕ್ಕಾರ ಕೂಗುವಮೂಲಕ ಪ್ರತಿಭಟನೆ ಆರಂಭಿಸಿದ್ದಾರೆ. ಸಿಎಂ ಯಡಿಯೂರಪ್ಪ ಬೆಳಗಾವಿ ಸಾಮ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದು, ಇತ್ತ ಮನವಿ ತೆಗೆದುಕೊಳ್ಳುವುದಾಗಿ ಕರೆಸಿ ಮನವಿ ಸ್ವೀಕರಿಸದೆ ರೈತರನ್ನು ಅವಮಾನ ಮಾಡಿದ್ದಾರೆಂದು. ಸಿಎಂ ಯಡಿಯೂರಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ.
ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಕಿತ್ತುಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ . ಬಂಡವಾಳಶಾಹಿಗಳು , ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಳ್ಳಲು ಮುಂದಾಗಿದ್ದಾರೆ. ಭೂಗಳ್ಳ ಹಾಗೂ ರೈತವಿರೋದಿ ಸಿಎಂ ಎಂದು ಘೋಷಣೆ ಕೂಗಿ ಬೊಬ್ಬೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಹೋದ ವರ್ಷ ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಬೆಳೆ ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ . ಕೂಡಲೇ ಸಂತ್ರಸ್ತರೆಲ್ಲರಿಗೂ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.