ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥ ನಮ್ಮ ಮೇಲೆ ವಿಶ್ವಾಸವಿಡಿ : ರಮೇಶ ಜಾರಕಿಹೊಳಿ

  • 6 Jan 2024 , 1:46 AM
  • Belagavi
  • 100


ಬೆಳಗಾವಿ: ತಾಲೂಕಿನ ಪಿರಣವಾಡಿ ಗ್ರಾಮದ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾನ ವಿವಾದ ವಿಚಾರವಾಗಿ ಇಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪಕ್ಷಾತೀತವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳುತ್ತೇವೆ. ಎಂದು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಳಗಾವಿ ಸರ್ಕಿಟ್ ಹೌಸ್‍ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕುರುಬ ಸಮಾಜದ ಮುಖಂಡರ ಜೊತೆ ಚರ್ಚೆ ಮಾಡಿದ್ದೇನೆ. ಕೆ.ಎಸ್.ಈಶ್ವರಪ್ಪನವರು ಶನಿವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಅವರ ಜೊತೆ ಚರ್ಚಿಸಿ, ಮಾಜಿ ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಜೊತೆಯೂ ಈ ಬಗ್ಗೆ ಚರ್ಚೆ ಮಾಡಿ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ನಿರಂಜನಾಂದ ಪುರಿ ಸ್ವಾಮಿಜಿ ಜೊತೆ ಮಾತನಾಡಿದ್ದೇನೆ. ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ಮುಖಂಡರಿಗೆ ಭರವಸೆ ನೀಡಿದ್ದಾರೆ. ನಾವು ಪಕ್ಷಾತೀತವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳುತ್ತೇವೆ. ನಮ್ಮ ಮೇಲೆ ವಿಶ್ವಾಸವಿಡಿ ಎಂದು ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

Read All News