ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಬಿ.ಶರತ ಅಧಿಕಾರ ಸ್ವೀಕಾರ
- 18 Dec 2023 , 1:53 AM
- Mysuru
- 196
<p>
<strong>ಮೈಸೂರು</strong>: ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಬಿ.ಶರತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಪೈಲ್ ಗಳಿಗೆ ಸಹಿ ಮಾಡುವ ಮೂಲಕ ಅಧಿಕಾರ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿ ಬಿ.ಶರತ, ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಬೀದರ್ ಮತ್ತು ಮಂಡ್ಯ ಜಿಲ್ಲಾ ಪಂಚಾಯತ್‌ಗಳಲ್ಲಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಹಾಗೂ ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. 2011ರ ಐಎಎಸ್ ಬ್ಯಾಚ್ ನ ಅಧಿಕಾರಿಯಾಗಿದ್ದಾರೆ ಬಿ.ಶರತ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರನ್ನು ರಾಜ್ಯ ಸರ್ಕಾ ಆಡಳಿತ ಸಂಸ್ಥೆಯ ಜಂಟಿ ನಿರ್ದೇಶಕರಾಗಿ ನೇಮಕ ಮಾಡಿದೆ.
</p>