ಚಿಕ್ಕೋಡಿ : ನಿಪ್ಪಾಣಿ ಶಾಸಕಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ತನಗೆ ಕೋವಿಡ್ 19 ಸೋಂಕು ದೃಢಪಟ್ಟಿರುವ ವಿಚಾರವನ್ನು ಅವರು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ದೃಢಪಡಿಸಿದ್ದಾರೆ. ನನಗೆ ಕೊವಿಡ್ ಪಾಸಿಟಿವ್ ದೃಡಪಟ್ಟಿದ್ದು , ಯಾವುದೇ ರೋಗ ಲಕ್ಷಣಗಳು ಇಲ್ಲದಿದದ್ದಿರು ಮುನ್ನೆಚ್ಚರಿಕೆಯ ದೃಷ್ಟಿಯಿಂದ ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೈನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು , ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ಯಾರೆಂಟೈನ್ ಆಗಬೇಕು ' ಎಂದು ಸಚಿವೆ ಜೊಲ್ಲೆ ಅವರು ಮನವಿ ಮಾಡಿಕೊಂಡಿದ್ದಾರೆ.