ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ಸಚಿವ ಬಿ.ಸಿ. ಪಾಟೀಲ್

  • 17 Dec 2023 , 8:34 PM
  • Delhi
  • 115

ದೆಹಲಿ: ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಭೇಟಿ ಮಾಡಿದ್ದಾರೆ. ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ಕೃಷಿ ಸಚಿವನಾಗಿ ಕಳೆದ ಆರು ತಿಂಗಳು ಮಾಡಿದ ಕಾರ್ಯ, ಕೃಷಿ ಕ್ಷೇತ್ರದ ಮುಂಬರುವ ಯೋಜನೆಗಳ ಜೊತೆಗೆ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತಾಗಿಯೂ ಚರ್ಚೆ ನಡೆದಿದ್ದು ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಸಿಎಂ ಬಿಎಸ್ ಯಡಿಯೂರಪ್ಪ ಈ ವಾರದಲ್ಲಿ ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ಮಾಡುವುದಾಗಿ ಹೇಳಿದ ಬೆನ್ನಲ್ಲೇ ಸಚಿವ ಬಿ.ಸಿ. ಪಾಟೀಲ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿರುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ. ಹಾಗೂ ನವದೆಹಲಿಯ ಕೃಷಿಭವನದಲ್ಲಿ, ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕೈಲಾಶ್ ಚೌಧರಿ ಅವರನ್ನು ಭೇಟಿ ಮಾಡಿ, ರಾಜ್ಯದ ಕೃಷಿ ಅಭಿವೃದ್ಧಿಗಳ ಕುರಿತು ಚರ್ಚಿಸಿ, ರೈತ ಕಲ್ಯಾಣ ನಿಧಿ ಅಡಿಯಲ್ಲಿ ರಾಜ್ಯಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

Read All News