ಬೆಳಗಾವಿ: ಕೇಂದ್ರ ರಾಜ್ಯ ರೈಲ್ವೇ ಸಚಿವ ಸುರೇಶ ಅಂಗಡಿ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದೆ. ಪ್ರಸ್ತುತ ಅವರು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು. ಈ ಕುರಿತಂತೆ ಅವರೇ ಟ್ವೀಟ್ ಮಾಡಿದ್ದಾರೆ ನಾನು #Covid19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ.

ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ. ಎಂದು ಕೇಂದ್ರ ರಾಜ್ಯ ರೈಲ್ವೇ ಸಚಿವ ಅಂಗಡಿ ಮನವಿ ಮಾಡಿದ್ದಾರೆ.