ಬ್ಯಾಡಗಿ: ಕೇಂದ್ರ ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ ನಿಧನರಾದ ಹಿನ್ನಲೆಯಲ್ಲಿ ತಾಲೂಕಾ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ದಿವಂಗತ ಸುರೇಶ ಅಂಗಡಿಯವರಿಗೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೀರೇಂದ್ರ ಶೆಟ್ಟರ ಅಂಗಡಿಯವರು ರಾಜ್ಯಕ್ಕೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರ ಮನದಲ್ಲಿ ಹಚ್ಚಹಸಿರಾಗಿ ಉಳಿದಿದ್ದಾರೆ. ಕರ್ನಾಟಕ ರಾಜ್ಯ ಒಬ್ಬ ಉತ್ತಮ ಮುತ್ಸದ್ದಿಯನ್ನು ಕಳೆದುಕೊಂಡಿದೆ. ರಾಜ್ಯದಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಬೆಳೆಸುವಲ್ಲಿ ಶ್ರಮಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆತರುವಲ್ಲಿ ಯಶಸ್ವಿಯಾಗಿದ್ದರು. ಅವರ ನಿಧನದಿಂದ ಪಕ್ಷಕ್ಕೆ ತೀವ್ರ ನೋವು ತಂದಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಬಸವರಾಜ ಛತ್ರದ, ಬಾಲಚಂದ್ರಗೌಡ್ರ ಪಾಟೀಲ, ವಿನಯ ಹಿರೇಮಠ, ಸರೋಜಮ್ಮ ಉಳ್ಳಾಗಡ್ಡಿ, ಸುರೇಶ ಯತ್ನಳ್ಳಿ, ಆಸಾದಿ, ಜೀತೇಂದ್ರ ಸುಣಗಾರ, ಶಿವಯೋಗಿ ಗಡಾದ, ವಿದ್ಯಾಶೆಟ್ಟಿ, ಸಂಜೀವ ಮಡಿವಾಳರ, ಮಂಜುನಾಥ ಬಣಕಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.