ಚೆನ್ನೈ : ಭಾರತೀಯ ಚಿತ್ರರಂಗದ ಜನಪ್ರಿಯ ಗಾಯಕ, ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಸ್ಥಿತಿ ಚಿಂತಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಿಂದ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಪಿ ಬಿ ಆರೋಗ್ಯ ಸ್ಥಿತಿ ಈಗಲೂ ತುಂಬ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ಮಾನಿಟರಿಂಗ್ ಮಾಡುತ್ತಿದ್ದಾರೆ' ಎಂದು ತಿಳಿಸಿದೆ.
ಆಸ್ಪತ್ರೆಯ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದ್ದು ವೈದ್ಯರ ಸಲಹೆಯಂತೆ ಎಂ.ಜಿ.ಆರ್. ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಎಸ್.ಪಿ.ಬಿ.ಯವರ ಆರೋಗ್ಯ ಸ್ಥಿತಿ ಹಠಾತ್ ಕುಸಿತಗೊಂಡ ಕಾರಣದಿಂದ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ಗಣ್ಯರು ಈ ಕುರಿತು ಟ್ವೀಟ್ ಮಾಡಿದ್ದು, 'ಚೆನ್ನೈನ ಖಾಸಗಿ ಆಸ್ಪತೆಯಲ್ಲಿ ಆಗಸ್ಟ್ 5ರಿಂದ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಶ್ರೀ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಆಸ್ಪತ್ರೆಯ ಬುಲೆಟಿನ್ ಪ್ರಕಟಿಸಿದೆ. ಅವರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಸಲ್ಲಿಸಿದ್ದಾರೆ.