ಡ್ರಗ್ಸ್ ಜಾಲದ ಜೊತೆಗೆ ಬಾಲಿವುಡ್ ಸಿನಿ ಇಂಡಸ್ಟ್ರಿ ಥಳಕು

  • 15 Jan 2024 , 2:44 AM
  • Mahashtra
  • 116

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಪ್ರಕರಣ ಮತ್ತು ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎನ್‌ಸಿಬಿ ವಿಚಾರಣೆಗೆ ಹಾಜರಾಗಿದ್ದ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಸಾರಾ ಅಲಿಖಾನ್ ಅವರ ಮೊಬೈಲಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಡ್ರಗ್ಸ್ ಪ್ರಕರಣ ಸಂಬಂಧ ನಟಿ ದೀಪಿಕಾ ಹಾಗೂ ಇತರೆ ಟಾಪ್ ನಟಿಯರನ್ನು ಸತತ 6 ಗಂಟೆಗಳ ಕಾಲ ಎನ್‍ಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ದೀಪಿಕಾ ಅವರ ಉದ್ಯಮ ವ್ಯವಸ್ಥಾಪಕಿ ಕರಿಷ್ಮಾ ಅವರನ್ನು ಎನ್‌ಸಿಬಿ ತಂಡ ಶುಕ್ರವಾರ ವಿಚಾರಣೆಗೆ ಒಳಪಡಿಸಿತ್ತು.

Read All News