ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

  • 14 Jan 2024 , 10:25 PM
  • Delhi
  • 111

ನವದೆಹಲಿ: ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ನಿಧನರಾಗಿದ್ದಾರೆ. 82 ವರ್ಷದ ಜಸ್ವಂತ್ ಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ದೆಹಲಿಯಲ್ಲಿ ವಿಧಿವಶರಾಗದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಸ್ವಂತ್ ಸಿಂಗ್ ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಸಂಸತ್ ಗೆ ಆಯ್ಕೆಯಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಸಚಿವ ಸಂಪುಟದಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಜಸ್ವಂತ್ ಸಿಂಗ್ ನಿಭಾಯಿಸಿದ್ದರು.

Read All News