ಕೈಯಲ್ಲಿ ಪೊರಕೆ ಬಾರುಕೋಲು ಹಿಡಿದು ವಿಭಿನ್ನವಾಗಿ ಪ್ರತಿಭಟನೆ ಮಾಡಿದ ರೈತರು

  • 15 Jan 2024 , 4:46 AM
  • Belagavi
  • 115

ಬೆಳಗಾವಿ: ಭೂ ಸುಧಾರಣೆ ಮಸೂದೆ ಖಂಡಿಸಿ ಬಂದ ಕರೆ ಹಿನ್ನೆಲೆ ಗಡಿನಾಡು ಬೆಳಗಾವಿಯಲ್ಲಿ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಮತ್ತೊಂದು ಕಡೆ ನಗರದ ಕಿತ್ತೂರು ರಾಣಿ ಚೆನ್ನಮ್ಮಾ ವೃತ್ತದಲ್ಲಿ ರೈತ ಸಂಘಟನೆಗಳು ಸೇರಿದಂತೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದು ಕಡೆ ಕೈಯಲ್ಲಿ ಪೊರಕೆ ಹಾಗೂ ಬಾರುಕೋಲು ಹಿಡಿದು ರೈತ ಮಹಿಳೆಯರು, ಮುಖಂಡರು ರೈತ ವಿರೋಧಿ ಕಾನೂನನ್ನು ಹಿಂಪಡೆಯುವಂತೆ ಸರ್ಕಾರದ ವಿರುದ್ಧ ಚಾಟಿ ಬೀಸುವು ಮೂಲಕ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಇದಕ್ಕೆ ಬೆಂಬಲವಾಗಿ ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಕನ್ನಡಪರ ಹೋರಾಟಗಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

Read All News