ರೈತ ಪುತ್ರನಾದ ನಾನು ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ; ಸಿಎಂ ಬಿ.ಎಸ್. ಯಡಿಯೂರಪ್ಪ

  • 15 Jan 2024 , 3:55 AM
  • Bengaluru
  • 159

ಬೆಂಗಳೂರು: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ರಾಜ್ಯಾದ್ಯಂತ ಭುಗಿಲೆದ್ದಿದೆ. ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆನೀಡಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.

ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ರೈತನ ಪುತ್ರನಾಗಿದ್ದು , ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ. ರೈತ ಸಮುದಾಯಕ್ಕೆ ಧಕ್ಕೆಯಾಗಲು ಬಿಡಲ್ಲ .

ಇನ್ಮುಂದೆ ಯಾರೂ ಬೇಕಾದರೂ ಕೃಷಿ ಭೂಮಿಯನ್ನು ಕೊಂಡುಕೊಳ್ಳಬಹುದು. ಅನ್ನದಾತರ ಅನುಕೂಲಕ್ಕಾಗಿ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಕೃಷಿ ಉತ್ಪನ್ನಗಳನ್ನು ರೈತರು ಎಲ್ಲಿ ಬೇಕಾದರೂ ಮಾರಾಟ ಮಾಡಬಹದು.

ನಾವು ನೀರಾವರಿ ಜಮೀನನ್ನು ಕೃಷಿಗೆ ಮಾತ್ರ ಉಪಯೋಗಿಸಕೊಳ್ಳಬೇಕು ಹಾಗೂ ಎಪಿಎಂಸಿ ಬಾಗಿಲು ಬಂದ್ ಮಾಡಲ್ಲ. ಈ ಕಾನೂನನ್ನು ಜಾರಿ ಮಾಡಲು ಬಿಡಿ ನಂತರ 6 ತಿಂಗಳ ಬಳಿಕ ಪರಿಣಾಮ ಗೊತ್ತಾಗಲಿದೆ ಎಂದರು, ಅನಾವಶ್ಯಕವಾಗಿ ರೈತರನ್ನು ಗೊಂದಲಕ್ಕೆ ದೂಡಬೇಡಿ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

Read All News