ಹತ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ

  • 15 Jan 2024 , 2:06 AM
  • Mysuru
  • 103


ಮೈಸೂರು: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿಯ ಮೇಲೆ ನಡೆದ ಸಾಮಾಹಿಕ ಅತ್ಯಾಚಾರವನ್ನು ಖಂಡಿಸಿ, ತಪ್ಪಿತಸ್ಥರಿಗೆ ಸೂಕ್ತ ಕ್ರಮಕ್ಕೆ ಕೈಗೊಳ್ಳುವಂತೆ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ಸ್ ಆರ್ಗನೈಸೇಶನ್ ವತಿಯಿಂದ ಪ್ರತಿಭಟನೆ ನಡೆಯಿತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ನಮ್ಮ ದೇಶದಲ್ಲಿ ಮಹಿಳೆಯರ ಶೋಚನೀಯ ಮತ್ತು ವಾಸ್ತವ ಪರಿಸ್ಥಿತಿಯನ್ನು ಇಂತಹ ಘಟನೆಗಳು ತೋರಿಸುತ್ತವೆ ಟೀಕಿಸಿದರು ಪ್ರಸ್ತುತ ಭಾರತದಲ್ಲಿ ಆತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಹೇಳಿದರು .

Read All News