ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ತರಾತುರಿಯಲ್ಲಿ ತೆರೆಯುವಂತಿಲ್ಲ; ಶಿಕ್ಷಣ ಸಚಿವ ಸುರೇಶ ಕುಮಾರ ಸ್ಪಷ್ಟನೆ

  • 14 Jan 2024 , 10:02 PM
  • Bengaluru
  • 102

ಬೆಂಗಳೂರು: ಅನ್ ಲಾಕ್ 0.5 ಮಾರ್ಗಸೂಚಿಯನ್ನು ನಿನ್ನೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು , ಅದರಲ್ಲಿ ಶಾಲಾ - ಕಾಲೇಜು ಆರಂಭಿಸುವ ಜವಾಬ್ದಾರಿಯನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡಿದೆ ಎಂದು ಸ್ಪಷ್ಟಪಡಿಸಿದ್ದರಿಂದ, ರಾಜ್ಯದಲ್ಲಿ ಶಾಲಾ- ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತವಿಲ್ಲ. ತರಾತುರಿಯಲ್ಲಿ ಶಾಲೆಗಳನ್ನು ಪುನಾರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ಶಾಲೆಗಳ ಪ್ರಾರಂಭದ ಬಗ್ಗೆ ರಾಜ್ಯಗಳು ನಿರ್ಧಾರ ಕೈಗೊಳ್ಳಲು ಸೂಚನೆ ನೀಡಿದೆ. ಆದರೆ ನಾವು ಯಾವುದೇ ಆತುರದ ತೀರ್ಮಾನ ಕೈಗೊಳ್ಳುವುದಿಲ್ಲ. ನಾನು ಪ್ರತಿನಿತ್ಯ ಪೋಷಕರು ಶಿಕ್ಷಣ ತಜ್ಞರ ಜತೆ ಸಮಾಲೋಚನೆ ನಡೆಸುತ್ತಿದ್ದೇನೆ.

ಮಕ್ಕಳ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು ಹೀಗಾಗಿ ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಅಕ್ಟೋಬರ್ ಎರಡನೇ ವಾರದಲ್ಲಿ ತೀರ್ಮಾನ ತಿಳಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

Read All News