ಕೈ ಹಿಡಿದ ಡಿ.ಕೆ.ರವಿ ಪತ್ನಿ ಕುಸುಮಾ, ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ

  • 14 Jan 2024 , 11:25 PM
  • Belagavi
  • 95

ಬೆಂಗಳೂರು: ದಿ. ಡಿ.ಕೆ.ರವಿ ಪತ್ನಿ ಕುಸುಮಾ ಇಂದು ಬೆಳಗ್ಗೆ ಕಾಂಗ್ರೆಸ್ ಸದಸ್ಯತ್ವವನ್ನು ಪಡೆಯುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಳಗ್ಗೆ 10.40ಕ್ಕೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ಕುಸುಮಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡರು. ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡ ಹನುಂತರಾಯಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಡಿಸಿಎಂ ಪರಮೇಶ್ವರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಜಕುಮಾರ್ ಇತರರು ಉಪಸ್ಥಿತರಿದ್ದರು. ಆರ್.ಆರ್.ನಗರದಲ್ಲಿ ಸರ್ಪ್ರೈಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈ ಹಿಂದೆ ಹೇಳಿಕೆ ನೀಡಿದ್ದರು ಆ ಸರ್ಪ್ರೈಸ್ ಅಭ್ಯರ್ಥಿ ಕುಸುಮಾ ರವಿ ಅವರೇ ಎನ್ನಲಾಗಿದೆ. ಆರ್‌ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕುಸುಮಾ ರವಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

Read All News