ಬೆಳಗಾವಿ: ಇತ್ತೀಚಿಗೆ ಮಹಾಮಾರಿ ಕೊರೋನಾ ಸೋಂಕಿನಿಂದ ನಿಧನರಾದ ಕೇಂದ್ರ-ರಾಜ್ಯ ರೈಲ್ವೆ ಖಾತೆ ಸಚಿವ ದಿವಂಗತ ಸುರೇಶ ಅಂಗಡಿ ಅವರ ನಿವಾಸಕ್ಕೆ ಕರ್ನಾಟಕದ ರಾಜ್ಯಪಾಲರಾಗಿರುವ ವಾಜುಭಾಯ್ ವಾಲಾ ಇಂದು ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 8ನೇಯ ವಾರ್ಷಿಕ ಘಟಿಕೋತ್ಸವ ಸಮಾರಂಭಕ್ಕೆ ಆಗಮಿಸಿದ್ದ ಅವರು ನಂತರ ಸದಾಶಿವನಗರದ ದಿ. ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.