ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ನಡೆದ ಘಟನೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

  • 15 Jan 2024 , 3:31 AM
  • Belagavi
  • 108

ಬೆಳಗಾವಿ: ಉತ್ತರಪ್ರದೇಶದ ಬಲರಾಮಪುರ ಜಿಲ್ಲೆಯ ಹತ್ರಾಸ್ ನಲ್ಲಿ ನಡೆದ ಘಟನೆ ಖಂಡಿಸಿ ನಿನ್ನೇ ನಗರದ ಚೆನ್ನಮ್ಮಾ ವೃತ್ತದಲ್ಲಿ ಸರಪಳಿ ನಿರ್ಮಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕೆಲವು ದಿನಗಳ ಹಿಂದೆ ನಡೆದ ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಮನಿಷಾ ವಾಲ್ಮೀಕಿ ಎಂಬ 19 ವರ್ಷದ ಯುವತಿಯ ಮೇಲೆ ನಾಲ್ಕು ಜನ ಪುಂಡರು ಸೇರಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

ಅಲ್ಲಿಯ ಜನರಿಗೆ ಕಾನೂನಿನ ರಕ್ಷಣೆ ಇಲ್ಲ ಎಂದು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು ಕೂಡಲೇ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿ ಎಂದು ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಈ ರಾಜ್ಯದಲ್ಲಿ ಇಂತಹ ಘಟನೆಗಳು ನಡಿತಾನೆ ಇದೆ ಇನ್ನೊಂದು ಕಡೆ ಬಿಜೆಪಿ ಸರ್ಕಾರ ಭೇಟಿ ಪಡಾವೋ ಭೇಟಿ ಬಚಾವೋ ಅಂತಾ ಯಾವ ಬಾಯಿ ಮೂಲಕ ಹೇಳಿತೀದೆಯೋ ಗೊತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Read All News