ಚೆನ್ನೈ: ಹಿರಿಯ ನಟಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿರುವ ಖುಷ್ಬೂ ಸುಂದರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಿನ್ನೆ ರವಿವಾರ ರಾತ್ರಿಯೇ ಕಾಂಗ್ರೆಸ್ ಗೆ ವಿದಾಯ ಹೇಳಿದ್ದು, ಇಂದು ಸೋಮವಾರ ಬಿಜೆಪಿಗೆ ಸೇರಲಿದ್ದಾರೆ. ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ಲಭ್ಯವಾಗಿದ್ದು. ಖುಷ್ಬೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪ್ರಮುಖ ಹಿರಿಯ ನಾಯಕರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಕಳೆದ ವಾರ ಅಷ್ಟೇ ನಟಿ ಖುಷ್ಬೂ ಸುಂದರ್ ಬಿಜೆಪಿ ಸೇರ್ಪಡೆ ವಿಚಾರವನ್ನು ತಳ್ಳಿ ಹಾಕಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.