ಕುಸುಮಾ ಎಚ್ ಅವರ ಮೇಲಿನ ಪೋಲಿಸ್ ಎಫ್ ಐ ಆರ್ ಖಂಡಿಸಿ; ಕರ್ನಾಟಕ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಿಂದ ಪ್ರತಿಭಟನೆ

  • 26 Dec 2023 , 2:29 AM
  • Bengaluru
  • 214

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹೆಚ್ ರವರು ನೀತಿ ಸಂಹಿತೆಯ ಉಲ್ಲಂಘನೆ ಮಾಡಿದ್ದಾರೆಂದು ರಾಜರಾಜೇಶ್ವರಿ ನಗರ ಠಾಣೆಯ ಪೋಲಿಸರು ಎಫ್ ಐ ಆರ್ ಹಾಕಿರುವುದನ್ನು ಖಂಡಿಸಿ ಇಂದು ಅದೇ ಪೋಲಿಸ್ ಠಾಣೆಯ ಎದುರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ನೇತೃತ್ವದಲ್ಲಿ ಕರ್ನಾಟಕ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಸೇರಿ ಬೃಹತ್ ಪ್ರತಿಭಟನೆ ಮಾಡುವುದರ ಮೂಲಕ ಎಫ್ ಐ ಆರ್ ನ್ನು ಹಿಂಪಡೆಯುವಂತೆ ಪೋಲಿಸ್ ಠಾಣೆಯ ಅಧಿಕಾರಿಗಳಿಗೆ ಆಗ್ರಹಿಸಿದರು.

logintomyvoice

ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ, ಸೌಮ್ಯ ರೆಡ್ಡಿ, ಉಮಾಶ್ರೀ, ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು.

Read All News