ಬೆಳಗಾವಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಹುಟ್ಟುಹಬ್ಬದ ನಿಮಿತ್ಯ ಬೆಳಗಾವಿ ನಗರದಲ್ಲಿ ಗುರುವಾರದÀಂದು ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ.ಯಕ್ಸಂಬಾ ಇದರ 49ನೇ ನೂತನ ಶಾಖೆಯನ್ನು ಉದ್ಘಾಟನೆ ಹಾಗೂ ಪೂಜಾ ಸಮಾರಂಭವನ್ನು ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ನೆರೆವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ.ಯಕ್ಸಂಬಾ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಿ, ಜನರ ಆರ್ಥಿಕಾಭಿವೃದ್ಧಿಯನ್ನು ಹೆಚ್ಚಿಸಿ ಅವರು ಸ್ವಾವಲಂಬಿಗಳಾಗಿ ಬದುಕು ಸಾಗಿಸಲು ಒಂದು ಉತ್ತಮ ಅವಕಾಶ ಕಲ್ಪಿಸಿಕೊಡಲಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕತೆಯ ಅಭಿವೃದ್ಧಿಗೆ ಒತ್ತು ನೀಡುವುದು ಈ ಸಂಸ್ಥೆ ನಿಲುವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕು. ಜ್ಯೋತಿಪ್ರಸಾದ ಜೊಲ್ಲೆ, ಬಸವಪ್ರಸಾದ ಜೊಲ್ಲೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ, ಉತ್ತರ ಮತಕ್ಷೇತ್ರದ ಶಾಸಕ ಅನೀಲ ಬೆನಕೆ, ಬಿಜೆಪಿ ಮುಖಂಡ ಮಾರುತಿ ಅಷ್ಟಗಿ, ಸಂಚಾಲಕ ಮಂಡಳಿಯ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.