ಬೆಳಗಾವಿಗೆ ನೂತನ ಉಸ್ತುವಾರಿ ಸಚಿವರ ಆಗಮನ : ಹಲವು ಮಹನೀಯರ ಪುತ್ಥಳಿಗೆ ಮಾಲಾರ್ಪಣೆ..!
- 15 Jan 2024 , 2:26 AM
- Belagavi
- 113
ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಇಂದು ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಅವರು ನಗರದ ಕಿತ್ತೂರು ಚೆನ್ನಮ್ಮ ಹಾಗೂ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಸೇರಿದಂತೆ ವಿವಿಧ ಮಹನೀಯರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.
ಗೋಕಾಕದಿಂದ ನೇರವಾಗಿ ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಸಚಿವರು, ಕಿತ್ತೂರು ಚೆನ್ನಮ್ಮ, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಛತ್ರಪತಿ ಶಿವಾಜಿ ಹಾಗೂ ಬಸವೇಶ್ವರ ಪುತ್ಥಳಿಗಳಿಗೂ ಮಾಲಾರ್ಪಣೆ ಮಾಡಿದರು.
ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪಕ್ಷದ ಕಾರ್ಯಕರ್ತರು ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ಪ್ರವಾಸಿಮಂದಿರಕ್ಕೆ ತೆರಳಿದ ಅವರನ್ನು ನೂರಾರು ಬೆಂಬಲಿಗರು ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.