ಮೈಸೂರು: ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಪತ್ನಿ, ಇಬ್ಬರು ಚಿಕ್ಕ ವಯಸ್ಸಿನ ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಜಯವಾಣಿ, ಕಸ್ತೂರಿ ನ್ಯೂಸ್ ಸೇರಿದಂತೆ ಸದ್ಯ ಮೈಸೂರಿನ ಪ್ರಜಾವಾಣಿ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.