ಅ.21 ರಂದು ಉತ್ತರದತ್ತ ಪ್ರಯಾಣ ಬೆಳೆಸಲಿರುವ ಸಿಎಂ ಯಡಿಯುರಪ್ಪ

  • 15 Jan 2024 , 3:46 AM
  • Bengaluru
  • 137

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉತ್ತರ ಕರ್ನಾಟಕ ತತ್ತರಿಸಿದೆ. ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹದಿಂದ ಭಾರಿ ಪ್ರಮಾಣ ನಷ್ಟವುಂಟಾಗಿದೆ. ಈ ಹಿನ್ನಲೆಯಲ್ಲಿ ಅ.21 ರಂದು ಸಿಎಂ ಯಡಿಯುರಪ್ಪ ಉತ್ತರ ಕರ್ನಾಟಕದತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರವಾಹದಿಂದ ಈಗಾಗಲೆ 4 ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಭಾಗಶಃ ಜಲಾವೃತವಾಗಿದ್ದು ನಷ್ಟಕೊಳಗಾದ ಜಿಲ್ಲೆಗಳಿಗೆ ಸಿಎಂ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ.

ಜಿಲ್ಲಾಡಳಿತದಿಂದ ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ ನೇರವಾಗಿ ಪರಿಸ್ಥಿತಿ ಅರಿಯುವ ಉದ್ದೇಶದಿಂದ ವೈಮಾನಿಕ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Read All News