ಹೆಬ್ಬಾಳಕರ ಮತಕ್ಷೇತ್ರದಲ್ಲಿ ಕಿಟ್ ವಿತರಣೆ ಮಾಡಿದ ಸಚಿವ ರಮೇಶ ಜಾರಕಿಹೊಳಿ..!
- 15 Jan 2024 , 2:14 AM
- Belagavi
- 110
ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಂದು ಬೆಳಗಾವಿಗೆ ಆಗಮಿಸಿದ ಹಿನ್ನಲೆಯಲ್ಲಿ ಸಚಿವ ರಮೇಶ ಜಾರಕಿಹೊಳಿ, ಕೇಂದ್ರ ಸಚಿವ ಸುರೇಶ್ ಅಂಗಡಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಂದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಜನರಿಗೆ ಕಿಟ್ ವಿತರಣೆ ಮಾಡಿದರು. ಹೆಬ್ಬಾಳಕರ ಮತ ಕ್ಷೇತ್ರದವಾದ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಜಿಲ್ಲಾಡಳಿತದಿಂದ ಸಂಕಷ್ಟ ದಲ್ಲಿ ಇರುವ ರೈತರು, ಕೂಲಿ ಕಾರ್ಮಿಕರಿಗೆ ಕಿಟ್ ವಿತರಣೆ. ಈ ಕಾರ್ಯಕ್ರಮದಲ್ಲಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮುಖಾಮುಖಿಯಾಗಿ ಒಂದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು ಪರಸ್ಪರ ಮುಖ ನೋಡದ ಹಾಗೆ ಉಳಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.