ಚಿಕ್ಕೋಡಿ: ತಾಲೂಕಿನ ಯಡೂರ ಸೇರಿದಂತೆ ವಿವಿಧೆಡೆ ಕಂದಾಯ ಸಚಿವ ಆರ್.ಅಶೋಕ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲ್ಲೋಳ-ಯಡೂರ ಬ್ರಿಡ್ಜ್ ಗೆ ಬೋಟ್ ಮುಖಾಂತರ ತೆರಳಿ ಕೃಷ್ಣಾ ನದಿಯ ನೀರಿನ ಮಟ್ಟ ಹೆಚ್ಚಳದಿಂದ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲಿಸಿದರು ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮಳೆಯಿಂದಾಗಿ ಹಾನಿಯಾದ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ, ಶಾಸಕರಾದ ದುರ್ಯೋಧನ ಐಹೊಳೆ, ಪಿ.ರಾಜೀವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.