ಶಾಲೆಯ ನೂತನ ಕೊಠಡಿಗಳನ್ನು ಉಧ್ಘಾಟಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

  • 15 Jan 2024 , 6:46 AM
  • Belagavi
  • 108

ಬೆಳಗಾವಿ: ತಾಲೂಕಿನ ವಾಘವಾಡೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯ ಎರಡು ನೂತನ ಕೊಠಡಿಗಳನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್  ಉದ್ಘಾಟಿಸಿದರು. ಜೊತೆಗೆ ಇದೆ ವಾಘವಾಡೆ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ಒಂದು ಹೆಚ್ಚುವರಿ ಕೊಠಡಿ ನಿರ್ಮಾಣದ ಕಾಮಗಾರಿಗೂ ಸಹ ಭೂಮಿ ಪೂಜೆಯನ್ನು ನೆರವೇರಿಸಿ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜುಟ್ಟನವರ, ಇಂಜಿನಿಯರ್ ಜಾಧವ್, ಯುವರಾಜ ಕದಂ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read All News