ರಾಣೇಬೆನ್ನೂರ: ಆರ್‌ಟಿಇಕಾಯ್ದೆ ವಿಸ್ತರಣೆ, ಪಿಯುಸಿ ಉಪನ್ಯಾಸಕರಿಗೆ ಶೀಘ್ರದಲ್ಲಿ ನೇಮಕಾತಿ ಪತ್ರ ವಿತರಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕಿನ ಮೆಡ್ಲೇರಿ ಗ್ರಾಮದ ಎಸ್‌ಎಫ್‌ಐ ಕಾರ್ಯಕರ್ತರು ಗುರುವಾರ ಉಪ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಆರ್‌ಟಿಇಕಾಯ್ದೆಯಿಂದಖಾಸಗಿ ಶಾಲೆಗಳಲ್ಲಿ 1ರಿಂದ 8ನೇ ತರಗತಿವರೆಗೆ ಬಡವರು, ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗದ ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ. ಆದರೆ 9ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ಹಣವನ್ನು ಕಟ್ಟಬೇಕಾಗುತ್ತದೆ. ಇದರಿಂದ ಹೆಚ್ಚುವರಿ ಶುಲ್ಕ ಕಟ್ಟಲಾಗದೆ ಬಹುತೇಕ ಮಕ್ಕಳು ಪಾಲಕರುಶಾಲೆಯಿಂದ ಮಕ್ಕಳನ್ನು ಬಿಡಿಸಿ ಬೇರೆ ಸರಕಾರಿ ಶಾಲೆಗೆ 9ನೇ ತರಗತಿ ದಾಖಲಾತಿ ಮಾಡುತ್ತಿದ್ದಾರೆ. ಹೀಗಾಗಿ 8ನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ 9ಮತ್ತು 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಆದ್ದರಿಂದ ಸರಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರ್‌ಟಿಇ ಕಾಯ್ದೆಯನ್ನು 9 ಮತ್ತು 10ನೇ ತರಗತಿವರೆಗೂ ವಿಸ್ತರಣೆ ಮಾಡಬೇಕು. 2015ರಲ್ಲಿ ಪರೀಕ್ಷೆ ಬರೆದು ನೇಮಕಾತಿಗೊಂಡ ಪಿಯುಸಿ ಉಪನ್ಯಾಸಕರುಗಳಿಗೆ ಆದಷ್ಟು ಶೀಘ್ರ ನೇಮಕಾತಿ ಆದೇಶ ನೀಡಬೇಕು. ಅಕ್ಷರ ದಾಸೋಹ ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲ ಸರಕಾರಿ ಶಾಲೆಗಳ ಮಕ್ಕಳಿಗೆ ಮೇ ತಿಂಗಳಿನಿAದ ನವಂಬರ್ ತಿಂಗಳವರೆಗೂ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡಬೇಕಾದ ದವಸಧಾನ್ಯಗಳನ್ನು ಕೇರಳ ರಾಜ್ಯದ ಮಾದರಿಯಲ್ಲಿ ಶಾಲೆಯ ಶಿಕ್ಷಕರ ಮೂಲಕ ವಿದ್ಯಾರ್ಥಿಗಳ ಮನೆಗೆತಲುಪಿಸುವ ವ್ಯವಸ್ಥೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ. ಈ ಸಂಧರ್ಭದಲ್ಲಿ ತಾಲೂಕು ಸಮಿತಿ ಸಹ ಕಾರ್ಯದರ್ಶಿ ಶ್ರೀಕಾಂತ್ ಬಾರ್ಕಿ, ಶಿವರಾಜ ದೊಡ್ಡಬಳ್ಳಾಪುರ, ಮಾರುತಿ ತಳವಾರ, ಮಂಜುನಾಥ ಚಕ್ರಸಾಲಿ, ಸುನೀಲ ಪೂಜಾರ, ಚಂದ್ರುಬಾರ್ಕಿ, ಪುನಿತ್ ವ್ಯಾಪಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.