ಒಂದೇ ದಿನ 205 ಕೋರೊನಾ ಪಾಸಿಟಿವ್ ಪ್ರಕರಣ ಜಿಲ್ಲೆಯಲ್ಲಿ ಹೆಚ್ಚಿದೆ ಆತಂಕ
- 14 Jan 2024 , 10:38 PM
- Udupi
- 145
ಉಡಪಿ: ರಾಜ್ಯದಲ್ಲಿ ಒಂದೇ ದಿನ ಒಟ್ಟು 515 , ಕೋವಿಡ್ 19 ಪ್ರಕರಣಗಳು ದೃಢಪಟ್ಟಿವೆ . ಇದರಲ್ಲಿ ಉಡುಪಿ ಒಂದೇ ಜಿಲ್ಲೆಯಲ್ಲಿ 205 ಪ್ರಕರಣಗಳು ಕಂಡು ಬಂದಿವೆ . ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 768 ಕ್ಕೆ ಏರಿಕೆಯಾಗಿದೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ದಿನ 2,000 ಕ್ಕಿಂತ ಹೆಚ್ಚು ಮಾದರಿಗಳ ಪರೀಕ್ಷೆ ಮಾಡಲಾಗಿದೆ ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದಿದ್ದ 8,500 ಜನರ ಮೇಲೆ ನಿಗಾ ಇಡಲಾಗಿದೆ ಮುಂದೆ ಸೋಂಕಿತರ ಸಂಖ್ಯೆ ಕಡಿಮೆಯಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ರಾಜ್ಯದಲ್ಲೇ ಅತಿ ಹೆಚ್ಚು ಸೋಂಕಿತರು ಇರುವ ಜಿಲ್ಲೆಗಳಲ್ಲಿ ಉಡುಪಿ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 768ಕ್ಕೆ ಏರಿಕೆಯಾಗಿದ್ದು, 685 ಪ್ರಕರಣಗಳಿವೆ. 82 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇಂದು ಉಡುಪಿಯಲ್ಲಿ ಪತ್ತೆಯಾದ ಎಲ್ಲಾ ಪಾಸಿಟಿವ್ ಪ್ರಕರಣಗಳಿಗೆ ಮಹಾರಾಷ್ಟ್ರವೇ ಮೂಲವೆಂದು ಎಂದು ವರದಿಯಲ್ಲಿ ತಿಳಿಸಲಾಗಿದೆ .