ಕಾಗವಾಡ: ಪಟ್ಟಣದಲ್ಲಿಂದು ರೈತ ಮೋರ್ಚಾ ಮಂಡಲ ಕಾರ್ಯಕಾರಣಿ ಸಭೆ ಜರುಗಿತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಾ. ರಾಜೇಶ ನೇರ್ಲಿ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು ಜನರಿಗೆ ಒಳ್ಳೆಯ ಆಡಳಿತವನ್ನು ನೀಡುತ್ತಿದೆ. ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಉತ್ತಮವಾಗಿ ಆಡಳಿತ ನಿಡುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ದುಂಡಪ್ಪಾ ಬೆಂಡವಾಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಖೇತಗೌಡರ, ನಿಂಗಪ್ಪ ಕೋಖಲೆ, ಅಮೃತ ಕುಲಕರ್ಣಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಸತ್ಯಪ್ಪಾ ನಾಯಿಕ, ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹಾವೀರ ನಾಶಿಪುಡಿ ಹಾಗೂ ಧರೇಪ್ಪ ಠಕ್ಕಣ್ಣವರ, ಮಂಡಲ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ, ರೈತ ಮೋರ್ಚಾ ಮಂಡಲ ಅಧ್ಯಕ್ಷ ಉದಯ ದೇಸಾಯಿ, ಸಾಮಾಜಿಕ ಜಾಲತಾಣ ಜಿಲ್ಲಾ ಸಂಚಾಲಕ ಪ್ರಸಾದ ಪಚಂಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.