ನವದೆಹಲಿ: ಬಹು ನಿರೀಕ್ಷತ ಹಾಗೂ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರ ಕನಸಿನಂತೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಕೇಂದ್ರ ಆರ್ಥಿಕ ಸಚಿವಾಲಯವು ಇದೆ ಅಕ್ಟೋಬರ್ 7ರಂದು ನಡೆಸಿದ ಸಭೆಯಲ್ಲಿ ಅಂದಾಜು ರೂ. 13,926/- ಕೋಟಿ ವೆಚ್ಚದಲ್ಲಿ, 148 ಕಿಲೋ ಮೀಟರ್ ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಸಹಿ ಹಾಕಿದ್ದು, ಕಾಮಾಗಾರಿ ಪೂರ್ಣಗೊಳ್ಳುವಷ್ಟರಲ್ಲಿ ರೂ. 15,767/- ಕೋಟಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ಈ ಯೋಜನೆಯಲ್ಲಿ ಬೆಂಗಳೂರು-ದೇವನಹಳ್ಳಿ, ಚಿಕ್ಕಬಾಣಾವರ-ಬೈಯಪ್ಪನಹಳ್ಳಿ, ಕೆಂಗೇರಿ-ವೈಟ್‌ಫೀಲ್ಡ್ ಹಾಗೂ ಹೀಲಲಿಗೆ-ರಾಜಾನುಕುಂಟೆ ಮಾರ್ಗಗಳು ಇವೆ.
Remembering Suresh Angadi (@SureshAngadi_) October 26, 2020
ಇದರಿಂದ ಬೆಂಗಳೂರು ನಗರವಾಸಿಗಳಿಗೆ ಇನ್ನೂ ಹೆಚ್ಚಿನ ಅನುಕೂಲವಾಗಲಿದ್ದು, ಟ್ರಾಫಿಕ್ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ದಿವಂಗತ ಸುರೇಶ್ ಅಂಗಡಿಯವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.