ಬೆಳಗಾವಿ: ಇನ್ನು 3 ವರ್ಷ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಬೆಳಗಾವಿಯ ತಮ್ಮ ಕಛೇರಿಯಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ಕೂಗು ಕೇಳಿ ಬರುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಇನ್ನು ಮೂರು ವರ್ಷ ಮುಖ್ಯಮಂತ್ರಿಗಳಾಗಿ ಅವಧಿಯನ್ನು ಅವರೇ ಪೂರ್ಣಗೊಳಿಸಲಿದ್ದಾರೆ. ಕರ್ನಾಟಕ ರಾಜ್ಯವನ್ನು ಸುವರ್ಣ ಕರ್ನಾಟಕ ರಾಜ್ಯವನ್ನಾಗಿ ಮಾಡುತ್ತೇವೆ, ರಾಜ್ಯದ ಪ್ರತಿಯೊಬ್ಬ ಸಾಮಾನ್ಯ ಜನರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೊಳಿಸುವ ಯೋಜನೆ ಹಾಕಿಕೊಂಡಿದ್ದಾರೆ.
ಅಷ್ಟೇ ಅಲ್ಲದೇ ಮುಂದಿನ ಚುನಾವಣೆಯೂ ಕೂಡ ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಪ್ರಕಾಶ ಹುಕ್ಕೇರಿ ಅವರ ಬಗ್ಗೆ ಈಗಾಗಲೇ ಸತೀಶ ಜಾರಕಿಹೊಳಿ ಅವರು ಉತ್ತರ ಕೊಟ್ಟಿದ್ದಾರೆ. ಹೀಗಾಗಿ ನಾನು ಉತ್ತರ ಕೊಡುವ ಅವಶ್ಯಕತೆಯಿಲ್ಲ ಎಂದರು, ಬಿಜೆಪಿ ಓರ್ವ ವ್ಯಕ್ತಿಯ ಪಕ್ಷ ಅಲ್ಲ. ಸಾಮೂಹಿಕ ಸಂಘಟನೆ ಹೊಂದಿರುವ ಪಕ್ಷವಾಗಿದೆ. ಈ ಬಗ್ಗೆ ರಾಜ್ಯಾಧ್ಯಕ್ಷ ಕಟೀಲ್, ಪ್ರಧಾನ ಕಾರ್ಯದರ್ಶಿ ಸಂಘಟನಾ ಮಹಾಮಂತ್ರಿ ಅರುಣ್ ಸೇರಿ ಹಿರಿಯ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.