ಬೆಳಗಾವಿ: ಲೋಕಸಭೆ ಬೈ ಎಲೆಕ್ಷನ್ ಬಗ್ಗೆ ಮಾತನಾಡಿದ ಶಂಕರಗೌಡ ಪಾಟೀಲ್ ನಾವು ಎಲ್ಲರೂ ಸೇರಿ ಸುರೇಶ ಅಂಗಡಿ ಅವರ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂದು ನಾವು ಹೇಳಿದ್ದೇವೆ. ನನನ್ನು ಸೇರಿದಂತೆ ಅನೇಕರ ಹೆಸರು ಕೇಳಿ ಬರುತ್ತಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೇರಿ ಹಲವು ಹಿರಿಯ ನಾಯಕರು ಸುರೇಶ ಅಂಗಡಿ ಅವರ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಹೀಗಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವ ಬದ್ಧರಾಗಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್ನ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಡಿಸಿಎಂ ಲಕ್ಷ್ಮಣ ಸವದಿ ಅವರ ಮಾತು ಸತ್ಯಕ್ಕೆ ಸಮೀಪವಾಗಿದೆ. ಇನ್ನು ಕಾಂಗ್ರೆಸ್ ಅಷ್ಟೇ ಅಲ್ಲ, ಇನ್ನು ಬೇರೆ ಬೇರೆ ಪಕ್ಷಗಳ ನಾಯಕರು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಹೇಳಿದ್ದಾರೆ.