ನವದೆಹಲಿ: ತಮಗೆ ಕೋರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು ಪದಗಳನ್ನು ಹುಡುಕುವುದು ನನಗೆ ಅಪರೂಪ, ಆದ್ದರಿಂದ ಸರಳವಾಗಿ ತಿಳಿಸುತ್ತಿದ್ದೇನೆ. ನನಗೆ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ.
ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ತಕ್ಷಣವೇ ಪರೀಕ್ಷೆಗೆ ಒಳಪಡಲು ವಿನಂತಿಸುತ್ತಿದ್ದೇನೆ,ಎಂದು ಸ್ಮೃತಿ ಇರಾನಿ ಟ್ವೀಟ್ ಮಾಡಿದ್ದಾರೆ.