ಅಹಮದಾಬಾದ್: ಗುಜರಾತ್ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೇಶುಭಾಯಿ ಪಟೇಲ್ ( 92 ) ಅವರು ಇಂದು ವಿಧಿವಶರಾಗಿದ್ದಾರೆ. ಉಸಿರಾಡಲು ತೊಂದರೆಯಾಗುತ್ತಿದೆ ಎಂದು ಬೆಳಗ್ಗೆಯಷ್ಟೇ ಮನೆಯವರ ಬಳಿ ಹೇಳಿಕೊಂಡಿದ್ದರು. ಬಳಿಕ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಇಂದು (ಗುರುವಾರ) ಕೊನೆಯುಸಿರೆಳೆದಿದ್ದಾರೆ. ಇವರಿಗೆ ಸೆಪ್ಟೆಂಬರ್‌ನಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು ಆದರೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದರಿಂದ ಚೇತರಿಸಿಕೊಂಡಿದ್ದ ಅವರು ಇಂದು ಅಹಮದಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇವರು ಎರೆಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಇವರ ನಿಧನದಿಂದ ಬಿಜೆಪಿ ಮತ್ತೋರ್ವ ನಾಯಕನನ್ನು ಕಳೆದುಕೊಂಡಂತಾಗಿದೆ. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Our beloved and respected Keshubhai has passed away…I am deeply pained and saddened. He was an outstanding leader who cared for every section of society. His life was devoted towards the progress of Gujarat and the empowerment of every Gujarati. pic.twitter.com/pmahHWetIX
— Narendra Modi (@narendramodi) October 29, 2020
ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮೂಲಕ ಸಂತಾಪ ಸೂಚನೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ, ಜನಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ಎರಡು ಬಾರಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಅಪೂರ್ವ ಕೊಡುಗೆ ನೀಡಿದ್ದರು .
Deeply saddened by the demise of senior leader & former Gujarat Chief Minister Shri Keshubhai Patel ji. My heartfelt condolences to his family and followers. Om Shanti
— B.S. Yediyurappa (@BSYBJP) October 29, 2020
ಸಮಾಜದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಶ್ರಮಿಸಿದ ಅವರ ನಿಧನದಿಂದ ಸಜ್ಜನ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.