ಮೊದಲ ಬಾರಿಗೆ ಬಿಡಿಸಿಸಿ ಬ್ಯಾಂಕ್ 16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆ ಪ್ರಯತ್ನ ; ಡಿಸಿಎಂ ಲಕ್ಷ್ಮಣ ಸವದಿ

  • 23 Dec 2023 , 6:52 AM
  • Belagavi
  • 92

ಬೆಳಗಾವಿ: ಇತಿಹಾಸದಲ್ಲಿ ಮೊದಲ ಬಾರಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಗೆ 16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆ ನಡೆಸಲು ಪ್ರಯತ್ನಿಸಲಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು, ಕರ್ನಾಟಕದಲ್ಲಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ನಲ್ಲಿ ಬೆಳಗಾವಿ ಬ್ಯಾಂಕ್ ಮೊದಲ ಸ್ಥಾನದಲ್ಲಿದೆ.

logintomyvoice

ಇಲ್ಲಿ ಪ್ರತಿ ಐದು ವರ್ಷ ಚುನಾವಣೆ ನಡೆಯುತ್ತದೆ. ರೈತರ ಏಳಿಗೆಗಾಗಿ ಶ್ರಮಿಸುವ ಬ್ಯಾಂಕ್ ನಲ್ಲಿ ಅವಿರೋಧ ಆಯ್ಕೆಯಾಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಸೇರಿದಂತೆ ಪಕ್ಷದ ಪರಿವಾರದವರ ಸೂಚನೆ ಮೇರೆಗೆ ತೀರ್ಮಾನಕ್ಕೆ ಬಂದಿದ್ದೇವೆ ನಮ್ಮಲ್ಲಿರುವ ಭಿನ್ನಾಪ್ರಾಯ ಬದಿಗಿಟ್ಟು ಒಂದಾಗಿ ಹೋಗುವ ನಿಟ್ಟಿನಲ್ಲಿ ಜಿಲ್ಲೆಯ ರಾಜಕಾರಣ ಒಂದಾಗಿ ಹೋಗುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ನಾವು ಒಂದೇ ಪಕ್ಷದಲ್ಲಿದ್ದವರು ವೈಮನಸ್ಸು ಇರಬಾರದು ಎಂದು.

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆಯಾಗಬೇಕೆಂದು ತೀರ್ಮಾನಕ್ಕೆ ಬಂದಿದ್ದೇವೆ ಎಂದು ಹೇಳಿದರು. ಈಗಾಗಲೇ ಏಳು ತಾಲೂಕಿನ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಂದೇ ನಾಮಪತ್ರ ಸಲ್ಲಿಕೆಯಾಗಿವೆ. ಇನ್ನೂ ನಾಲ್ಕು ಕ್ಷೇತ್ರದಲ್ಲಿ ಎರಡು ಮೂರು ನಾಮಪತ್ರ ಸಲ್ಲಿಕೆಯಾಗಿವೆ. ಖಾನಾಪುರ, ರಾಮದುರ್ಗ, ಬೈಲಹೊಂಗಲ ಕ್ಷೇತ್ರದಲ್ಲಿ ಒಂದಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಸಿರುವುದರಿಂದ ಆ ಅಭ್ಯರ್ಥಿಯ ಮನವೊಲಿಸಲು ನಾವು ಪ್ರಯತ್ನ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಉಪ ಸಭಾಪತಿ ಆನಂದ ಮಾಮನಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಉಮೇಶ ಕತ್ತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read All News