ಬೆಳಗಾವಿ: ಆಟೋನಗರದಲ್ಲಿರುವ ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟ ಹಾಗೂ ಬೆಳಗಾವಿ ಜಿಲ್ಲಾ ವಿಕಲಚೇತನರ ಕ್ರೀಡಾ ಸಂಘದ ವತಿಯಿಂದ 65 ನೇ ಕರ್ನಾಟಕ ರಾಜ್ಯೋತ್ಸವವನ್ನು ಸರಳವಾಗಿ, ಸಂಭ್ರಮದಿಂದ ಆಚರಿಸಲಾಯಿತು.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ನಿಗಮ ಮಂಡಳಿ ಅಧ್ಯಕ್ಷ ಮುಖ್ತಾರ ಪಠಾಣ ಧ್ವಜಾರೋಹನ ನೆರವೇರಿಸಿದರು, ಈ ಸಂದರ್ಭದಲ್ಲಿ ಸುರೇಶ ಯಾದವ ಸೇರಿದಂತೆ ಸಮಾಜ ಸೇವಕರು, ಮತ್ತು ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.